ಆನೇಕಲ್ : ವಿಧಾನ ಸಭಾ ಕ್ಷೇತ್ರದ ಅತ್ತಿಬೆಲೆ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಚಂದನಾ ಕುಮಾರ್ ರವರು ಅಧ್ಯಕ್ಷರಾಗಿ, ಜಯಲಕ್ಷ್ಮಿ ವೆಂಕಟೇಶ್ ರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು.
ಇನ್ನು ಇದೇ ಸಂಧರ್ಭದಲ್ಲಿ ಅತ್ತಿಬೆಲೆ ಪುರಸಭೆಯ ನೂತನ ಅಧ್ಯಕ್ಷರಾದ ಚಂದನಾ ಕುಮಾರ್ ಮತ್ತು ಉಪಾಧ್ಯಕ್ಷರಾದ ಜಯಲಕ್ಷ್ಮಿ ವೆಂಕಟೇಶ್ ರವರು ಮಾತನಾಡಿ, ಅತ್ತಿಬೆಲೆ ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪುರಸಭೆಯ ಎಲ್ಲಾ ಸದಸ್ಯರ ಜೊತೆಗೂಡಿ ಹಂತವಾಗಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ತಿಬೆಲೆ ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.
ಇನ್ನು ಇದೇ ಸಂಧರ್ಭದಲ್ಲಿ ಅತ್ತಿಬೆಲೆ ಪುರಸಭೆ ಸದಸ್ಯರು, ಅತ್ತಿಬೆಲೆ ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣ್ಯಾತಿಗಣ್ಯರು ಭಾಗಿಯಾಗಿದ್ದರು.
Kshetra Samachara
15/03/2022 10:28 pm