ಆನೇಕಲ್: ಇನ್ನೇನು ಕೆಲವೇ ದಿನಗಳಲ್ಲಿ ಅಂಬೇಡ್ಕರ್ ಜಯಂತಿ ಮಾಡಲು ಕಾತರದಿಂದ ಕಾಯುತ್ತಿದ್ದಾರೆ ಅದರಲ್ಲೂ ರಾಷ್ಟ್ರಾದ್ಯಂತ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲು ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.. ಆದರೆ ಇಲ್ಲೊಂದು ಕಡೆ ಲಕ್ಷಾಂತರ ರೂಪಾಯಿ ಹಣವನ್ನು ಖರ್ಚು ಮಾಡಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿದೆ ಆದರೆ ಅದಕ್ಕೆ ಇದುವರೆಗೂ ಉದ್ಘಾಟನೆಯ ಭಾಗ್ಯ ಲಭಿಸಿಲ್ಲ.
ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಲಕ್ಷಾಂತರ ರೂಪದಲ್ಲಿ ಅಂಬೇಡ್ಕರ್ ನಿರ್ಮಾಣ ಮಾಡಲಾಗಿತ್ತು. ಆದರೆ ಇದುವರೆಗೆ ಅದಕ್ಕೆ ಉದ್ಘಾಟನೆ ಭಾಗ್ಯ ಲಭಿಸಿಲ್ಲ .. ಈ ಬಗ್ಗೆ ಗಮನಹರಿಸುವಂತೆ ಊರಿನ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.. ಜೊತೆಗೆ ಸುಮಾರು ಒಂದು ವರ್ಷ ಎರಡು ತಿಂಗಳು ಕಳೆದರೂ ಕೂಡ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಎಂದು ಊರಿನ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
Kshetra Samachara
11/04/2022 08:42 pm