ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನಸಂದ್ರ ಗ್ರಾಮದ ಬಸ್ ನಿಲ್ದಾಣದಿಂದ ಬೊಮ್ಮಂಡಹಳ್ಳಿ ಬಸ್ ನಿಲ್ದಾಣ ವರೆಗೆ ಮತ್ತು ಬೊಮ್ಮಂಡಹಳ್ಳಿಯ ಹತ್ತಿ ಮರದಿಂದ ಸರ್ವೇಶ್ವರ ಧಾಮದವರೆಗೆ ಸುಮಾರು 2 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಎಂ ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ಇನ್ನು ಇದೇ ಸಂದರ್ಭದಲ್ಲಿ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೆಚ್ಚಿನ ಅನುದಾನ ನೀಡುವಂತೆ ಸಾರ್ವಜನಿಕರು ಶಾಸಕ ಎಂ. ಕೃಷ್ಣಪ್ಪ ಅವರಿಗೆ ಮನವಿ ಪತ್ರವನ್ನು ನೀಡಿದರು.
ಪೂಜಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ರಾಜಶೇಖರ್ ರೆಡ್ಡಿ, ಕಲ್ಲುಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ಮುನಿರಾಜು, ಉಪಾಧ್ಯಕ್ಷರಾದ ಹರೀಶ್ ರೆಡ್ಡಿ ಮತ್ತು ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
26/04/2022 09:11 pm