ಆನೇಕಲ್: ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಇಂದು ಆನೇಕಲ್ ತಾಲೂಕು ಪಂಚಾಯಿತಿ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಇಲ್ಲಿನ ಆನೇಕಲ್ ಪಟ್ಟಣದ ಶಾಂತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರಾಯಸಂದ್ರ ಎಂಬ ಗ್ರಾಮದಲ್ಲಿ ಸರ್ವೆ ನಂಬರ್ 91ರ 1.20 ಗುಂಟೆ ಜಾಗದಲ್ಲಿ ಆಗಿನ ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಆಶ್ರಯ ಯೋಜನೆ ಅಡಿ ಈ ಜಾಗವನ್ನು ಕೋಲೆಬಸವ ಎಂಬ ಜನಾಂಗಕ್ಕೆ ಮಂಜೂರು ಮಾಡಲಾಗಿತ್ತು. ಜಾಗದಲ್ಲಿ ಸುಮಾರು ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕಾರಣಕ್ಕೆ ಇದರಿಂದ ಬೇಸತ್ತ ಜನರು ಇಂದು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ದೂರು ಸಹ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಚುನಾಯಿತ ಪ್ರತಿನಿಧಿಗಳು ಮತಪಡೆದು ಈ ಬಗ್ಗೆ ಗಮನಹರಿಸುತ್ತಿಲ್ಲ ಅಂತ ಚುನಾಯಿತ ಪ್ರತಿನಿಧಿಗಳ ವಿರುದ್ಧ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
Kshetra Samachara
14/07/2022 07:45 pm