ಬೆಂಗಳೂರು: ಮಹದೇವಪುರ ಕ್ಷೇತ್ರದ ಇಮ್ಮಡಹಳ್ಳಿ ಮುಖ್ಯರಸ್ತೆಯಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡು ತಿಂಗಳು ಕಳೆದರು ರಸ್ತೆ ಮಾತ್ರ ಇನ್ನೂ ದುರಸ್ಥಿಗೊಳಿಸಿಲ್ಲ. ಹದಗೆಟ್ಟ ರಸ್ತೆಗಳ ಅಭಿವೃದ್ಧಿ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು, ಸಾರ್ವಜನಿಕರು ಶಾಪ ಹಾಕುತ್ತಿದ್ದಾರೆ.
ಯುಜಿಡಿ ಕಾಮಗಾರಿಯಿಂದ ಇಡೀ ರಸ್ತೆ ಬೃಹತ್ ಗುಂಡಿ ಮಯವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಮಳೆಯಾದ ಸಂದರ್ಭದಲ್ಲಿ ಈ ರಸ್ತೆಗಳಲ್ಲಿ ಸಂಚಾರಿಸುವುದೇ ಸಾಹಸಮಯವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
30/05/2022 08:03 pm