ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್‌ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಆಗಮಿಸಿದ್ದಾರೆಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ವೈಟ್‌ಫೀಲ್ಡ್ ನ ಪ್ರವೀಣ್, ಮಧು, ಮನು, ನವಾಜ್, ಮಂಜು, ಸೂರ್ಯ, ನವೀನ್, ಶ್ರೀಧರ್ ಮತ್ತು ಅವರ ಸಹಚರರಿಗೆ ಪಕ್ಷದ ಶಾಲು ಹಾಕುವ ಮೂಲಕ ಬಿಜೆಪಿ ಪಕ್ಷಕ್ಕೆ ಶಾಸಕರು ಬರಮಾಡಿಕೊಂಡರು.

Edited By : PublicNext Desk
Kshetra Samachara

Kshetra Samachara

30/05/2022 11:06 pm

Cinque Terre

898

Cinque Terre

0

ಸಂಬಂಧಿತ ಸುದ್ದಿ