ಬೆಂಗಳೂರು: ಕೆಆರ್ ಪುರದ ಹೊರಮಾವು ವಾರ್ಡ್ ನ ಜಯಂತಿ ನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಉದ್ಘಾಟಿಸಿದರು.
ಹೊರಮಾವು ಸೇರಿದಂತೆ ದೇವಸಂದ್ರ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅನುಕೂಲ ದೃಷ್ಟಿಯಿಂದ ಈ ವಿದ್ಯಾರ್ಥಿ ನಿಲಯವನ್ನು ನಿರ್ಮಾಣ ಮಾಡಲಾಗಿದೆ. ಈ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
02/06/2022 10:00 pm