ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಹದೇವಪುರ ಕ್ಷೇತ್ರಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಹದೇವಪುರದ ಕ್ಷೇತ್ರದ ಕುಂದಲಹಳ್ಳಿ ಗೇಟ್ ಬಳಿ ಹೊಸದಾಗಿ ನಿರ್ಮಿಸಲಾದ ಅಂಡರ್ ಪಾಸ್, ತೂಬರಹಳ್ಳಿಯಿಂದ - ಬಳೆಗೆರೆ 100 ಅಡಿ ರಸ್ತೆ ಕಾಮಗಾರಿ, ಮತ್ತು ಪಣತ್ತೂರು ರೈಲ್ವೆ ಅಂಡರ್ ಪಾಸ್ ಬಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಮನೋಹರ್ ರೆಡ್, ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಎಲ್ ಶ್ರೀ ನಾಗೇಶ್, ಶ್ರೀ ಲೋಕೇಶ್ ಕುಮಾರ್ ಅವರು ಶ್ರೀ ಮಂಜುನಾಥ್ ಮತ್ತು ಶ್ರೀ ಅಶೋಕ್ ರೆಡ್ಡಿ ಅವರು ಉಪಸ್ಥಿತರಿದ್ದರು.
Kshetra Samachara
14/06/2022 05:41 pm