ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಂಟು ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಕೆ ಆರ್ ಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಹಾಗೂ ಕೊರೊನಾ ವಾರಿಯರ್ಸ್ ಸಿಬ್ಬಂದಿಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸನ್ಮಾನಿಸಿದರು.
ಕಳೆದ 8 ವರ್ಷಗಳಲ್ಲಿ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದಲ್ಲಿ ಅನೇಕ ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು ,ಇದರಿಂದ ಕೋಟ್ಯಂತರ ಜನರು ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ.
ಉತ್ತಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಜನರ ಮನ್ನಣೆ ಗಳಿಸುವಲ್ಲಿ ಭಾರತೀಯ ಜನತಾ ಪಾರ್ಟಿ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.
ಕೊರೊನಾ ಎಂಬ ಮಹಾಮಾರಿ ಇಡೀ ದೇಶವನ್ನೇ ನಡುಗಿಸಿದೆ. ಅನೇಕ ಅಮಾಯಕರ ಜೀವವನ್ನು ತೆಗೆದು ಅದೆಷ್ಟೋ ಕುಟುಂಬಗಳು ಬೀದಿಗೆ ಬೀಳುವಂತಾಗಿತ್ತು.ಇಂತಹ ಸಂದರ್ಭದಲ್ಲಿ ವೈದ್ಯಕೀಯ ಮತ್ತು ಕೊರೊನಾ ವಾರಿಯರ್ಸ್ ತಮ್ಮ ಪ್ರಾಣದ ಹಂಗನ್ನು ತೊರೆದು ಕೊರೊನಾ ನಿರ್ಮೂಲನೆಗೆ ಪಣ ತೊಟ್ಟಿದ್ದರು ಅಂದಿನಿಂದ ಇಂದಿನವರೆಗೂ ಸುದೀರ್ಘವಾಗಿ ಕೊರೊನಾ ವಿರುದ್ಧ ಹೋರಾಟದಲ್ಲಿರುವುದನ್ನು ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಆಂತೋಣಿ ಸ್ವಾಮಿ , ಬೆಂ. ನಗರ ಜಿಲ್ಲಾ ಉಪಾಧ್ಯಕ್ಷ ಮುನೇಗೌಡ , ತಾಲ್ಲೂಕು ವೈದ್ಯಾಧಿಕಾರಿ ಮಂಜುನಾಥ್ , ಹಿರಿಯ ವೈದ್ಯರಾದ ಅಶೋಕ್ ರೆಡ್ಡಿ , ವಾರ್ಡ್ ಅಧ್ಯಕ್ಷ ಶಮಂತ್ ಮುಖಂಡರಾದ ಶಿವಪ್ಪ , ಪಟಾಕಿ ರವಿ , ಕೆ ಪಿ ಕೃಷ್ಣ ಸೇರಿ ಮತ್ತಿತರರು ಇದ್ದರು.
Kshetra Samachara
15/06/2022 02:00 pm