ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಸಕ್ರಾ ವಲ್ಡ್ ಆಸ್ಪತ್ರೆಯಿಂದ ಬೆಳ್ಳಂದೂರು ಕೋಡಿ ರಸ್ತೆಯಲ್ಲಿ ಮಳೆ ನೀರು ನಿಂತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅರವಿಂದ ಲಿಂಬಾವಳಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಾಜಕಾಲುವೆಯಲ್ಲಿ ಹೂಳು ತುಂಬಿದ್ದು ಮತ್ತು ಅನೇಕ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ಒತ್ತುವರಿ ತೆರವು ಮಾಡಿ ಅದನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
21/06/2022 04:43 pm