ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕದ್ದು ಮೋಜು ಮಸ್ತಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರ ಪೂರ್ವ ವಿಭಾಗದ ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜೇಶ್ ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ ಸುಮಾರು 5,00,000 ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಮಮೂರ್ತಿ ನಗರ ಪೊಲೀಸರ ಕಾರ್ಯಾಚರಣೆಗೆ ಬೆಂಗಳೂರು ಉಪವಿಭಾಗದ ಉಪ ಪೊಲೀಸ್ ಕಮಿಷನರ್ ಡಾ.ಭೀಮಶಂಕರ್ ಎಸ್. ಗುಳೇದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kshetra Samachara
27/06/2022 06:06 pm