ಬೆಂಗಳೂರು: ಮಹದೇವಪುರ ಕ್ಷೇತ್ರದ ಕಾಡುಗುಡಿ ವಾರ್ಡನ ಅಂಬೇಡ್ಕರ್ ಗುಟ್ಟದಲ್ಲಿ ಪ್ರಧಾನ ಮಂತ್ರಿ ಅವಾಸ್ ಸರ್ವರಿಗೂ ಸೂರಿ ಯೋಜನೆಯ ಅಡಿಯಲ್ಲಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅರವಿಂದ ಲಿಂಬಾವಳಿ ಭೂಮಿ ಪೂಜೆ ನೆರವೇರಿಸಿದರು.
ಅಷ್ಟೇ ಅಲ್ಲದೆ ಇಮ್ಮಡಿಹಳ್ಳಿ ರಸ್ತೆಯ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿ ಬೆಸ್ಕಾಂ ವಿಭಾಗ ಕಚೇರಿ ಹಾಗೂ ಉಪವಿಭಾಗ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ತ್ವರಿತಗತಿಯಲ್ಲಿ ಉತ್ತಮ ಗುಣಮಟ್ಟದೊಂದಿಗೆ ಕಾಮಗಾರಿಗಳು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
30/06/2022 08:48 pm