ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿದ್ದವ ಬಂಧಿಸಿದ ಸಿಸಿಬಿ ಅಧಿಕಾರಿಗಳು

ಬೆಂಗಳೂರು: ವೈಟ್ ಫೀಲ್ಡ್ ವಿಭಾಗದ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಗ್ಸ್ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಂದಾಜು ಎಂಬತ್ತು ಲಕ್ಷ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುಗಳಾದ 1 ಕೆಜಿ 5 ಗ್ರಾಂ ತೂಕದ ಹ್ಯಾಶಿಶ್ ಆಯಿಲ್, 1 ಕೆಜಿ 200 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ದ್ವಿಚಕ್ರವಾಹನ, ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೃತ್ಯುಂಜಯ ಬಂಧಿತ ಆರೋಪಿ. ಆಂಧ್ರಪ್ರದೇಶದ ಪರಿಚಯಸ್ಥ ವ್ಯಕ್ತಿಯಿಂದ ಖರೀದಿಸಿದ ಈ ಮಾದಕ ವಸ್ತುಗಳನ್ನು ತನ್ನ ವಶದಲ್ಲಿಟ್ಟುಕೊಂಡು ಕಳ್ಳಸಾಗಾಣಿಕೆ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು. ಈತನ ವಿರುದ್ದ ಮಾಲೂರು ಮತ್ತು ಬೆಂಗಳೂರಿನ ಬಾಣಸವಾಡಿ, ಹೆಚ್‌ಎಎಲ್, ವೈಯಾಲಿಕಾವಲ್ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.

ಆರೋಪಿಯು ಮಾದಕ ವಸ್ತುಗಳ ಸಾಗಾಟ/ಮಾರಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದರಿಂದ ಈತನ ವಿರುದ್ದ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ 1984 ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

Edited By : PublicNext Desk
Kshetra Samachara

Kshetra Samachara

07/07/2022 12:57 pm

Cinque Terre

526

Cinque Terre

0

ಸಂಬಂಧಿತ ಸುದ್ದಿ