ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿಯಲ್ಲಿ ನಿರ್ಮಾಣ ಆಗುತ್ತಿರುವ ರಾಜೀವಗಾಂಧಿ ಬಹುಮಹಡಿ ಕಟ್ಟಡಗಳ ಕಾಮಗಾರಿಯನ್ನು ವಸತಿ ಸಚಿವರಾದ ಶ್ರೀ ವಿ. ಸೋಮಣ್ಣ ಹಾಗೂ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಪರಿವೀಕ್ಷಣೆ ಮಾಡಿದರು.
ಮುಂಬರುವ ಒಂದು ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆ ಸಿದ್ಧತೆಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ರಾಜೀವಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಬಸವರಾಜ್, ಮುಖ್ಯ ಅಭಿಯಂತರರಾದ ಶ್ರೀ ಸಣ್ಣಚಿತ್ತಯ್ಯ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಸಂಗಪ್ಪ ಸೇರಿದಂತೆ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
17/07/2022 02:10 pm