ಬೆಂಗಳೂರು: ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದ ಯೋಜನೆಯಡಿ ಕೆಆರ್ ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುತ್ತಮುತ್ತಲಿನಲ್ಲಿ ಪ್ಲಾಸ್ಟಿಕ್ ಕಸವನ್ನು ಎನ್.ಎಸ್.ಎಸ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವ ಮೂಲಕ ರೋಗಗಳು ಹರಡದಂತೆ ತಡೆಗಟ್ಟಬಹುದು ಎಂದು ವಿದ್ಯಾರ್ಥಿಗಳು ಸಾರಿದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಘಟಕದ ಮುಖ್ಯಸ್ಥರಾದ ಡಾ. ವಿಜಯ್ ಕುಮಾರ್ ಪ್ರೊ.ರಾಜಣ್ಣ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯಸ್ಥೆ ಡಾ.ತಾರಾಮಣಿ, ಡಾ.ರಾಘವೇಂದ್ರ ವಿದ್ಯಾರ್ಥಿಗಳು ಭಾಗವಹಿಸಿದರು.
Kshetra Samachara
18/07/2022 08:09 pm