ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾರ್ಯಕರ್ತರಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸಿದ ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು: ಕೇಂದ್ರ ಸರ್ಕಾರದ ಹರ್ ಘರ್ ತಿರಂಗ್ ಅಭಿಯಾನದ ಅಂಗವಾಗಿ ಮಹದೇವಪುರ ಕ್ಷೇತ್ರದ ಶಾಸಕ‌ ಅರವಿಂದ ಲಿಂಬಾವಳಿ ಕಾರ್ಯಕರ್ತರಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸಿದರು.

ಮಹದೇವಪುರ ಕ್ಷೇತ್ರದ ಹೂಡಿಯ ಶೆರಟಾನ್ ಹೋಟೆಲ್ ನಲ್ಲಿ ಹೂಡಿ, ಬೆಳತೂರು, ಕಾಡುಗೋಡಿ ಹಾಗೂ ಹೊಸ ವಾರ್ಡ್‌ಗಳ ಬೂತ್ ಮಟ್ಟದ ಸಭೆಯಲ್ಲಿ ಭಾಗವಹಿಸಿ ವಿತರಿಸಿದರು.

ಪ್ರತೀ ಮನೆಗಳಲ್ಲಿ ತ್ರಿವರ್ಣ ಧ್ವಜ (ಹರ್ ಘರ್ ತಿರಂಗ) ಹಾರಿಸಲು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಅಭಿಯಾನಕ್ಕೆ ಕರೆ ನೀಡಿದ್ದು, ಅದರಂತೆ ಸಭೆಯಲ್ಲಿ ತಮ್ಮ ಕ್ಷೇತ್ರದ 600ಕ್ಕೂ ಅಧಿಕ ಕಾರ್ಯಕರ್ತರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಬಿ. ಎನ್. ನಟರಾಜ್, ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/07/2022 07:35 pm

Cinque Terre

404

Cinque Terre

0

ಸಂಬಂಧಿತ ಸುದ್ದಿ