ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿ ಎಸ್.ಬಿ.ಆರ್. ಪ್ಯಾಲೇಸ್‍ನಲ್ಲಿ ಆಯೋಜಿಸಲಾಗಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಮಹದೇವಪುರ ಕ್ಷೇತ್ರದ ರಾಜಕೀಯ ಸಂಪರ್ಕ ಘಟಕದ ಅಧ್ಯಕ್ಷರಾದ ಸುಂದರ್ ಎ ಮತ್ತು ಬೆಳ್ಳಂದೂರಿನ ನಜೀರ್ ಪಾಷಾ ಸೇರಿದಂತೆ ಅನೇಕರು ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರ, ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಪಕ್ಷ ಸೇರ್ಪಡೆಗೊಂಡಿರುವುದಾಗಿ ಅವರು ತಿಳಿಸಿದರು.
ಆಮ್ ಆದ್ಮಿ ಪಕ್ಷದ ಮುಖಂಡರನ್ನು ಶಾಸಕ ಅರವಿಂದ ಲಿಂಬಾವಳಿ ಶಾಲು ಹಾಕಿ, ಭಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
27/07/2022 03:02 pm