ಬೆಂಗಳೂರು: ಮಹದೇವಪುರ ಕ್ಷೇತ್ರದ ವೈಟ್‌ಫೀಲ್ಡ್‌ನ ಇನ್ನರ್ ಸರ್ಕಲ್‌ನಲ್ಲಿ ಹಗದೂರು ಮತ್ತು ವೈಟ್‌ಫೀಲ್ಡ್ ಹೊಸ ವಾರ್ಡ್‌ಗಳ ಬೂತ್ ಮಟ್ಟದ ಸಭೆಯನ್ನು ಶಾಸಕ ಅರವಿಂದ್ ಲಿಂಬಾವಳಿ ಉದ್ಘಾಟಿಸಿದರು.
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳು, ರಾಜ್ಯ ಸರ್ಕಾರ ಹಾಗೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮತದಾರರಿಗೆ ತಲುಪಿಸುವ ಕಾರ್ಯದ ಜೊತೆಗೆ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿಕೊಳ್ಳುವಂತೆ ಕಾರ್ಯಕರ್ತರಿಗೆ ಶಾಸಕರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ' (ಹರ್ ಘರ್ ತಿರಂಗ) ಹಾರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಅಭಿಯಾನಕ್ಕೆ ಚಾಲನೆ ನೀಡಿದ್ದು, ಇಂದಿನ ಸಭೆಯಲ್ಲಿ 500ಕ್ಕೂ ಅಧಿಕ ಕಾರ್ಯಕರ್ತರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಮನೋಹರ ರೆಡ್ಡಿ .ಮುಖಂಡರಾದ ಶ್ರೀನಿವಾಸ.ಚಂದ್ರಶೇಖರ ರಡ್ಡಿ.ಅರವಿಂದ್ ಬಾಬು. ಮಹೇದ್ರಮೊದಿ.ಅಶೋಕ. ರಾಜೇಶ್. ಮಧು.ಶ್ರೀದರ್ ಹಾಗೂ ಕಾರ್ಯಕರ್ತರು ಉಪಸ್ಥಿತಿಯಿದ್ದರು.
Kshetra Samachara
01/08/2022 02:36 pm