ಬೆಂಗಳೂರು: ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿ ಕುರಿತು ಶಾಸಕ ಅರವಿಂದ ಅಧ್ಯಕ್ಷತೆಯಲ್ಲಿ ಮಾರತ್ತಹಳ್ಳಿಯ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು..
ಹಾನಿಗೊಳಗಾದ ಪ್ರದೇಶಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಬಿಬಿಎಂಪಿ, ಬಿಡಬ್ಲ್ಯೂ ಎಸ್ ಎಸ್ ಬಿ, ಬೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕರು ಚರ್ಚಿಸಿದರು..
ಮಳೆ ನೀರಿನಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಅಥವಾ ಹಾನಿಯ ನಿರ್ವಹಣೆಗೆ ಸಹಾಯ ಮಾಡಲು 139 ವಸತಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ತೊಂದರೆಗೆ ಒಳಗಾದವರು ಶಾಸಕರ ಕಚೇರಿಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ಪಡೆಯುವಂತೆ ಸಭೆಯಲ್ಲಿ ತಿಳಿಸಲಾಯಿತು.
ಈ ಸಭೆಯಲ್ಲಿ ಮುಖ್ಯ ಅಭಿಯಂತರರಾದ ಶ್ರೀ ಬಸವರಾಜ್ ಕಬಾಡೆ ಸೇರಿದಂತೆ ಅಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
10/09/2022 01:31 pm