ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಖ್ಯಮಂತ್ರಿ ಬೊಮ್ಮಾಯಿಯೊಂದಿಗೆ ಮಹದೇವಪುರ ವಲಯದ ಅಧಿಕಾರಿಗಳ ಸಭೆ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ಕ್ಷೇತ್ರದಲ್ಲಿ ಮಳೆಯಿಂದಾಗಿ ಸಂಭವಿಸಿದ ಸಮಸ್ಯಗಳ ಕುರಿತು ಶಾಸಕ ಅರವಿಂದ ಲಿಂಬಾವಳಿ ಹಾಗೂ ಮಹದೇವಪುರ ವಲಯದ ಬಿಬಿಎಂಪಿ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು..

ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು, ರಾಜಕಾಲುವೆ ಒತ್ತುವರಿ ತೆರವು, ಮಳೆಯಿಂದಾಗಿ ಸಮಸ್ಯೆಗೊಳಗಾಗಿರುವ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ ಎಸ್‌ಡಬ್ಲ್ಯೂಡಿ, ಬೆಸ್ಕಾಂ, ಕಂದಾಯ ಇಲಾಖೆ ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಬಿಡಿಎ, ವಸತಿ ನಿಗಮ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/09/2022 05:19 pm

Cinque Terre

886

Cinque Terre

0

ಸಂಬಂಧಿತ ಸುದ್ದಿ