ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸರ್ಕಾರ 40% ಕಮಿಷನ್ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ?:ಡಿಕೆಶಿ

ಬೆಂಗಳೂರು: ಸರ್ಕಾರ 40% ಕಮಿಷನ್ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ? ಅಧಿಕಾರದಲ್ಲಿರುವವರು ಹಾಗೂ ಜವಾಬ್ದಾರಿ ಹೊತ್ತಿರುವವರ ಕಡೆ ಬೆಟ್ಟು ಮಾಡುವುದು ಸಹಜ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ನಿದ್ರಾಮಯ್ಯ ಎಂದು ಲೇವಡಿ ಮಾಡುತ್ತಿದ್ದರು. ನನ್ನನ್ನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಕರೆಯುತ್ತಾರೆ. ರಾಜಕಾರಣದಲ್ಲಿ ಅಧಿಕಾರದಲ್ಲಿರುವವರು ಇವೆಲ್ಲವನ್ನೂ ಅರಗಿಸಿಕೊಳ್ಳಬೇಕು ಎಂದರು.

ವ್ಯಂಗಚಿತ್ರಗಳಲ್ಲಿ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳನ್ನು ಕ್ರಿಯಾತ್ಮಕ ರೀತಿಯಲ್ಲಿ ಲೇವಡಿ ಮಾಡುತ್ತಾರೆ. ಭ್ರಷ್ಟಾಚಾರ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಪ್ರಶ್ನಿಸಲಾಗಿದೆ. ವಿವಿಧ ರೀತಿಯಲ್ಲಿ ಜನರಿಗೂ ಈ ವಿಚಾರ ಮುಟ್ಟಿಸಬೇಕಾಗುತ್ತದೆ. ಹೀಗಾಗಿ ಈ ರೀತಿ ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಇದು ಆರೋಗ್ಯಕರ ರಾಜಕೀಯ' ಎಂದು ತಿಳಿಸಿದರು.

ಇದರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುತ್ತೇವೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, ' ಅವರು ದೂರು ನೀಡಲಿ. ಅವರ ಬಗ್ಗೆ ವ್ಯಂಗ್ಯಚಿತ್ರಗಳು ಬಂದಾಗ ಯಾಕೆ ದೂರು ನೀಡಲಿಲ್ಲ? ಇದರಲ್ಲಿ ತಪ್ಪೇನು? ಸಾರ್ವಜನಿಕ ಜೀವನದಲ್ಲಿ ಇರುವಾಗ ಇದನ್ನು ಸ್ವೀಕರಿಸಬೇಕು ಎಂದು ತಿಳಿಸಿದರು.

Edited By : PublicNext Desk
PublicNext

PublicNext

21/09/2022 11:47 pm

Cinque Terre

19.95 K

Cinque Terre

1

ಸಂಬಂಧಿತ ಸುದ್ದಿ