ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನ ದಸರಾ ಉತ್ಸವ: ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

24/09/2022 01:13 pm

Cinque Terre

862

Cinque Terre

0

ಸಂಬಂಧಿತ ಸುದ್ದಿ