ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವದಲ್ಲೇ ಅತಿದೊಡ್ಡ ಸದಸ್ಯತ್ವ ಹೊಂದಿರುವ ಪಕ್ಷ ಬಿಜೆಪಿ: ವಿ ಸೋಮಣ್ಣ

ಬೆಂಗಳೂರು: ವಿಶ್ವದ ಅತಿದೊಡ್ಡ ಸದಸ್ಯತ್ವ ಹೊಂದಿರುವ ಪಕ್ಷ ಎಂಬ ಹೆಗ್ಗಳಿಕೆ ಬಿಜೆಪಿ ಪಕ್ಷಕ್ಕೆ ಸಲ್ಲುತ್ತದೆ. ಸೇವಾ ಪಾಕ್ಷಿಕ ಪ್ರಯುಕ್ತ ಈ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ದೇಶದಾದ್ಯಂತ ಹಮ್ಮಿಕೊಳ್ಳಲಾಗಿರುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಯಂಡಹಳ್ಳಿ ವೃತ್ತದ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಂದು ಹನಿ ರಕ್ತ, ಒಬ್ಬರ ಜೀವ ಉಳಿಸಬಲ್ಲುದು. ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವಲ್ಲಿ ರಕ್ತದಾನ ಶಿಬಿರ ಸಹಕಾರಿಯಾಗಿದೆ. ರಕ್ತದಾನ ಶ್ರೇಷ್ಠದಾನ, ಯುವ ಜನತೆ ರಕ್ತದಾನವನ್ನು ಮಾಡಿ ಜೀವದಾನವನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

Edited By : PublicNext Desk
Kshetra Samachara

Kshetra Samachara

24/09/2022 03:58 pm

Cinque Terre

708

Cinque Terre

0

ಸಂಬಂಧಿತ ಸುದ್ದಿ