ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮುಖ್ಯ ರಸ್ತೆಗಳು, ವಾರ್ಡ್ ರಸ್ತೆಗಳು ಹಾಗೂ ರಾಜಕಾಲುವೆಗಳ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಾರ್ಡ್ ಉಸ್ತುವಾರಿಗಳೊಂದಿಗೆ ಶಾಸಕ ಅರವಿಂದ ಲಿಂಬಾವಳಿ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು..
ಈ ವೇಳೆ ಈ ಯೋಜನೆಗಳ ಟೆಂಡರ್‌ಗೆ ಸಂಬಂಧಪಟ್ಟಂತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು..
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಶ್ರೀ ಬಸವರಾಜ್ ಕಬಾಡೆ, ನಗರ ಮಂಡಲ ಅಧ್ಯಕ್ಷರಾದ ಶ್ರೀ ಮನೋಹರ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಬಿ ಎನ್ ನಟರಾಜ್, ಮಹದೇವಪುರ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಶ್ರೀ ಕ್ಲೇಮೆಂಟ್ ಜಯಕುಮಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಾರ್ಡ್ ಉಸ್ತುವಾರಿಗಳು ಉಪಸ್ಥಿತರಿದ್ದರು.
Kshetra Samachara
26/09/2022 09:50 pm