ಬೆಂಗಳೂರು: ಮಹಾತ್ಮಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿದ ನಂತರ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು.
ವೇಳೆ ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ಮಾಜಿ ಸಚಿವರಾದ ರಾಮಚಂದ್ರ ಗೌಡ, ಮಾಜಿ ಉಪಮೇಯರ್ ಪದ್ಮಾವತಿ ಗಂಗಾಧರ್ ಗೌಡ, ಮಂಜುನಾಥ್ ರೆಡ್ಡಿ, ಸಂಪತ್ ರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
02/10/2022 10:54 am