ಬೆಂಗಳೂರು: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿ ಇದ್ದ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಎರಡನೇ ಪ್ರಧಾನಮಂತ್ರಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಕಡಿಮೆ ಅವಧಿಗೆ ಪ್ರಧಾನಿ ಆಗಿದ್ದರೂ ಅವರ ಕಾರ್ಯವೈಖರಿ, ಅವರಲ್ಲಿದ್ದ ರಾಷ್ಟ್ರಪ್ರೇಮ, ಅವರು ನಮಗೆ ಕೊಟ್ಟ ಸಂದೇಶ ಇಂದಿಗೂ ಪ್ರಸ್ತುತವಾಗಿವೆ ಎಂದರು.
1857ರಿಂದ ಆರಂಭಗೊಂಡ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕರು ಭಾಗವಹಿಸಿದ್ದರು. ಗಾಂಧೀಜಿಯವರು ಕೊನೆಯ 25-30 ವರ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ವೇಗವನ್ನು ಅವರು ಹೆಚ್ಚಿಸಿದ್ದರು ಎಂದು ತಿಳಿಸಿದರು.
Kshetra Samachara
02/10/2022 12:08 pm