ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೂಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜನೆ

ಬೆಂಗಳೂರು: ಮಹದೇವಪುರ ಕ್ಷೇತ್ರದ ಹೂಡಿ ಗ್ರಾಮದಲ್ಲಿ ಹೂಡಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮನೋಹರ್ ರೆಡ್ಡಿ ಚಾಲನೆ ನೀಡಿದರು.ಹೂಡಿಯ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಾಲ್ಕು ದಿನಗಳ ಕಾಲ ಪಂದ್ಯಾವಳಿಗಳು ನಡೆಯಲಿವೆ.ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾ ಪಟುಗಳು ಭಾಗವಹಿಸಿದ್ದು ಇನ್ನೂ ಭಾನುವಾರ ರಾತ್ರಿವರೆಗೂ ಪಂದ್ಯಗಳು ನಡೆಯಲಿವೆ.

ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ 28 ತಂಡಗಳು, ಮಹಿಳೆಯರ ವಿಭಾಗದಲ್ಲಿ 13 ತಂಡಗಳು ಭಾಗವಹಿಸಿದ್ದಾವೆ.ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ಪಿಳ್ಳಪ್ಪ, ಹಗದೂರು ಶ್ರೀನಿವಾಸ್, ಬಿಜೆಪಿ ರಾಜ್ಯಕಾರ್ಯಕಾರಿಣಿ ಸದಸ್ಯ ಅನಂತರಾಮಯ್ಯ,ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ್ ಮತ್ತಿತರರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

08/10/2022 08:17 pm

Cinque Terre

706

Cinque Terre

0

ಸಂಬಂಧಿತ ಸುದ್ದಿ