ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ರಸ್ತೆಗೆ ಡಾಂಬರೀಕರಣ

ದೊಡ್ಡಬಳ್ಳಾಪುರ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವೀರಾಪುರ ಮತ್ತು ಬಾಶೆಟ್ಟಿಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 1.50 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಮಣಯ್ಯ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ವೀರಾಪುರ, ಜಿಂಕೆಬಚ್ಚಹಳ್ಳಿ, ಮಜರಾಹೊಸಹಳ್ಳಿ ಗ್ರಾಮಗಳಲ್ಲಿ ಶಾಸಕರ ಅನುದಾನ, ಪಂಚಾಯತಿ ಅನುದಾನ, ಸಿಎಸ್ಆರ್ ಅನುದಾನ ಒಳಗೊಂಡ ಸುಮಾರು ಒಂದೂವರೆ ಕೋಟಿ ರೂಪಾಯಿಯ ಸುಸಜ್ಜಿತ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮೀಣ ಭಾಗದ ರಸ್ತೆಗಳ ಗುಣಮಟ್ಟದಲ್ಲಿ ಗುತ್ತಿಗೆದಾರರು ಯಾವುದೇ ರಾಜಿ ಇಲ್ಲದೆ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಬೇಕು. ಗ್ರಾಮೀಣ ಭಾಗದಲ್ಲಿ ನಡೆಯುವ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಿರ್ಲಕ್ಷ್ಯ ಮಾಡದೆ ಸಾರ್ವಜನಿಕ ಆಸ್ತಿ ಎಂಬ ಮನೋಭಾವವನ್ನು ಎಲ್ಲಾ ಗ್ರಾಮಸ್ಥರು ಬೆಳೆಸಿಕೊಳ್ಳುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದರು. ಬಿಜೆಪಿ ಸರಕಾರ ಅನುದಾನವನ್ನು ಬಿಡುಗಡೆ ಮಾಡುವುದರಲ್ಲಿ ತಾರತಮ್ಯ ಮಾಡುತ್ತಿದೆ. ಬಿಜೆಪಿಯೇತರ ಪಕ್ಷದ ಶಾಸಕರಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುತ್ತಿಲ್ಲ ಎಂದು ದೂರಿದರು.

Edited By : PublicNext Desk
Kshetra Samachara

Kshetra Samachara

13/10/2022 06:11 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ