ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಂದೋಬಸ್ತ್‌ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಬಂದೋಬಸ್ತ್‌ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ನಡೆದಿದೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ವಿವಿಧ ಬೇಡಿಕೆ ಆರೋಪಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಇಂದು ಬೆಳಗ್ಗೆ ಬಂದೋಬಸ್ತ್ ವೇಳೆ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿಯಿಟ್ಟಿದೆ. ಇನ್ಸ್‌ಪೆಕ್ಟರ್, ಮಹಿಳಾ ಸಿಬ್ಬಂದಿ ಸೇರಿದಂತೆ 10 ಜನರಿಗೆ ಜೇನು ಹುಳ ಕಚ್ಚಿದೆ. ಕೆಲ ಸಾರ್ವಜನಿಕರಿಗೂ ಹೆಜ್ಜೇನು ಕಚ್ಚಿದೆ. ಗಾಯಾಳುಗಳನ್ನು ಕೂಡಲೇ‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಸಿಬ್ಬಂದಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವು ದಿನಗಳಿಂದ ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಜೇನುಹುಳ ಗೂಡು ಕಟ್ಟಿಕೊಂಡಿತ್ತು.

Edited By : Nagesh Gaonkar
Kshetra Samachara

Kshetra Samachara

10/03/2022 03:44 pm

Cinque Terre

2.43 K

Cinque Terre

0