ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಿಂದೂ ರುದ್ರಭೂಮಿಯಲ್ಲಿ ಇಂದು ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಪುರಸಭೆ ಅಧ್ಯಕ್ಷ ಪದ್ಮನಾಭ ಭೇಟಿ ಮಾಡಿ ಪರಿಶೀಲನೆ ಮಾಡಿದರು.
ಇಲ್ಲಿನ ಆನೇಕಲ್ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ವಿವಿಧ ಕಾಮಗಾರಿಗಳನ್ನು ಪುರಸಭೆ ಅಧ್ಯಕ್ಷ ಪದ್ಮನಾಭ ಪರಿಶೀಲನ ಮಾಡಿ ಮಾತನಾಡಿದ ಅವರು ಹಿಂದೂ ರುದ್ರಭೂಮಿಯಲ್ಲಿ ಕಾಂಕ್ರೀಟ್ ರಸ್ತೆ, ಕಟ್ಟಿಗೆ ಚಿತಗಾರ ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳನ್ನು ನೆಡಲು ಸೂಚಿಸಲಾಯಿತು ಹಾಗೂ ಈಗಾಗಲೇ ಐ ಮ್ಯಾಕ್ಸ್ ಜೊತೆಗೆ ನೀರಿನ ಸಂಪರ್ಕ ಪಡೆಯಲಾಗಿದೆ. ಸಮಗ್ರವಾಗಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನಮ್ಮ ಪುರಸಭೆ ವತಿಯಿಂದ ನೀಡಲಾಗುವುದು ಎಂದು ಪುರಸಭೆ ಅಧ್ಯಕ್ಷರು ಪದ್ಮನಾಭ ತಿಳಿಸಿದರು..
Kshetra Samachara
23/03/2022 07:12 pm