ದೊಡ್ಡಬಳ್ಳಾಪುರ: ಆತ್ಮ ನಿರ್ಭರ ಯೋಜನೆಯಡಿ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ತಿನ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭು ಚೌಹಾಣ್ ಮಾಧ್ಯಮದೊಂದಿಗೆ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಗುವುದು. ಅದೇ ರೀತಿ ಆತ್ಮ ನಿರ್ಭರ ಯೋಜನೆಯಡಿ ಗೋಶಾಲೆ ಆರಂಭಿಸುವ ಚಿಂತನೆ ನಡೆದಿದೆ ಎಂದರು. ಹಾಗೇ ಈಗಾಗಲೇ ಬೆಂಗಳೂರು ವಲಯದಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳು ಕಾರ್ಯಾರಂಭಿಸಿವೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗ, ಮೈಸೂರು ವಿಭಾಗ, ಕಲಬುರ್ಗಿ ಉಪ ವಿಭಾಗದಲ್ಲಿ ಸಂಚಾರಿ ಚಿಕಿತ್ಸಾಲಯಗಳನ್ನ ಲೋಕಾರ್ಪಣೆಗೊಳಿಸಲಾಗುವುದು ಎಂದು ಹೇಳಿದರು.
ಪ್ರಾಣಿಹತ್ಯೆ ನಿರ್ಬಂಧ ಕಾಯ್ದೆ ಜಾರಿಯಾದ ಮೇಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾಣಿ ರಕ್ಷಣಾ ಸಹಾಯವಾಣಿಯನ್ನ ಆರಂಭಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ನೂರು ಕಡೆ ಗೋಶಾಲೆ ತೆರೆಯಲು ಯೋಜಿಸಿದ್ದಾರೆ. ಈಗಾಗಲೇ ಕಾರ್ಯಾರಂಭ ಮಾಡಿರುವ ಮೊದಲ ಹಂತದ ಗೋಶಾಲೆಗಳಿಗೆ 36 ಲಕ್ಷ ಬಿಡುಗಡೆ ಮಾಡಲಾಗಿದೆ ನೆರಳು ನೀರಿನ ವ್ಯವಸ್ಥೆ, ಮೇವಿನ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
PublicNext
25/06/2022 10:19 pm