ಕೇಂದ್ರ ಸರ್ಕಾರ ಆಹಾರ ಧಾನ್ಯಗಳ ಮೇಲೆ ಶೇ.5 ರಷ್ಟು GST ವಿಧಿಸುವ ನಿರ್ಧಾರ ಖಂಡಿಸಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ಇಂದು ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ಬಂದ್ ಇರಲಿದೆ. ಕರ್ನಾಟಕ ರಾಜ್ಯ ಅಕ್ಕಿ ಗಿರಿಣಿದಾರರ ಸಂಘ ಸಹ ಪ್ರತಿಭಟನೆಗೆ ಬೆಂಬಲ ನೀಡಿದೆ.
ರಾಜ್ಯಾದ್ಯಂತ ತಮ್ಮ ಎಲ್ಲ ಚಟುವಟಿಕೆಗಳನ್ನ ನಿಲ್ಲಿಸಿ ಪ್ರತಿಭಟನೆ ನಡೆಸಲಾಗ್ತಿದೆ. ಶೇ.5 ರಷ್ಟು GST ತೆರಿಗೆಯನ್ನು ವಿಧಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆಯುವಂತೆ ವ್ಯಾಪಾರಸ್ಥರು ಆಗ್ರಹಿಸಿದ್ದಾರೆ.
GST ಕೌನ್ಸಿಲ್ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರು ಮನವಿ ಮಾಡಿಕೊಂಡಿದ್ದಾರೆ. ನಾನ್ ಬ್ರಾಂಡೆಡ್ ವಸ್ತುಗಳ ವರ್ತಕರಿಗೆ ಸರ್ಕಾರದ ಹೊಸ ನಡೆಯಿಂದ ಬಹಳ ದೊಡ್ಡ ನಷ್ಟವಾಗಲಿದೆ ಎಂಬುದು ಕಾರ್ಮಿಕ ಸಂಘಟನೆಗಳ ವಾದವಾಗಿದೆ.
ಗೀತಾಂಜಲಿ, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
PublicNext
15/07/2022 01:06 pm