ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ಬಿಜೆಪಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ನಟ ಸುದೀಪ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತ್ರಿವರ್ಣ ಧ್ವಜ ನೀಡಿದರು.
ಜೆಪಿ ನಗರದ ಸುದೀಪ್ ನಿವಾಸಕ್ಕೆ ತೆರಳಿ ತ್ರಿವರ್ಣ ಧ್ವಜ ನೀಡಲಾಯ್ತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ ವಿ, ಶಾಸಕ ಸತೀಶ್ ರೆಡ್ಡಿ, ರಾಜ್ಯಸಭೆ ಸದಸ್ಯ ಜಗ್ಗೇಶ್, ಬೆಂಗಳೂರು ಕೇಂದ್ರ ಬಿಜೆಪಿ ಅಧ್ಯಕ್ಷ ಮಂಜುನಾಥ್ ಮತ್ತಿತರರು ಹಾಜರಿದ್ದರು.
PublicNext
08/08/2022 10:16 am