ಬೆಂಗಳೂರು: ಕೋರ್ಟ್ ಆದೇಶ ಉಲ್ಲಂಘಿಸಿ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದ್ದ ಕಾರಣ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಮೇಲೆ ಎಫ್ ಐಆರ್ ದಾಖಲಾಗಿದೆ.
ಹಲಸೂರು ಗೇಟ್ ಠಾಣೆಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಎರಡು ಪ್ರಕರಣ ದಾಖಲಾದ್ರೆ, ಇದ್ರಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿ ನೀಡಿದ ದೂರಿನ ಮೇರೆಗೆ ನಲಪಾಡ್ ಮೇಲೆ ದೂರು ದಾಖಲಾಗಿದೆ.
ಟೌನ್ ಹಾಲ್ ಮುಂಭಾಗ, ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬಿ.ಕೆ. ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್ ಅಳವಡಿಸಿತ್ತು ನಲಪಾಡ್ ಆ್ಯಂಡ್ ಟೀಮ್.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಯಿದತ್ತರಿಂದ ಪ್ರಥಮವಾಗಿ ದೂರು ದಾಖಲಾಗಿತ್ತು. ಇದಾದ ನಂತರ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚಂದ್ರಕಾಂತ್ ಕೂಡ 2ನೇ ದೂರು ನೀಡಿದ್ದು, ನಲಪಾಡ್ ವಿರುದ್ಧ ಕೇಸ್ ದಾಖಲಾಗಿದೆ.
PublicNext
19/02/2022 04:19 pm