ಆನೇಕಲ್: ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್, ಬೋಗಸ್ ಖಾತೆ, ಮೂಲಭೂತ ಸೌಕರ್ಯಗಳ ಬಗ್ಗೆ ಗ್ರಾಮಸ್ಥರ ತರಾಟೆ... ಈ ಎಲ್ಲ ನೋಟ ಕಂಡು ಬಂದಿದ್ದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ.
ಹೌದು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಲ್ಲುಬಾಳು ಗ್ರಾಮದಲ್ಲಿ ಮೊದಲ ಸುತ್ತಿನ ಗ್ರಾಮಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಅಧಿಕಾರಿಗಳನ್ನು ಮತ್ತು ಚುನಾಯಿತ ಸದಸ್ಯರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.
ಪ್ರಮುಖವಾಗಿ ಮೂಲಭೂತ ಸೌಕರ್ಯ ಹಾಗೂ ಬೋಗಸ್ ಖಾತೆ ಬಗ್ಗೆ, ಆನ್ ಲೈನ್ ಪೇಮೆಂಟ್ ಕುರಿತು ಸಾಕಷ್ಟು ಚರ್ಚೆ ನಡೆಯಿತು. ಈ ಗೊಂದಲದ ನಡುವೆಯೂ ಗ್ರಾಮಸಭೆ ಯಶಸ್ವಿಯಾಗಿ ನಡೆಯಿತು. ಗ್ರಾಮಸ್ಥರು ಹಾಗೂ ಚುನಾಯಿತ ಪ್ರತಿನಿಧಿಗಳು, ನಾನಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
Kshetra Samachara
22/05/2022 07:55 am