ಬೆಂಗಳೂರು: ಕೆ.ಆರ್.ಸರ್ಕಲ್ ಹಾಗೂ ಹಡನ್ಸ್ ಸರ್ಕಲ್‌ನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಫೆಕ್ಸ್ ಹರಿದ ಪ್ರಕರಣ ಸಂಬಂಧ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನ ಹಲಸೂರ್ ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ನೀಡಿದ ದೂರಿನ ಮೇರೆಗೆ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ ಐ ಆರ್ ದಾಖಲಾದ ಕೆಲವೇ ಗಂಟೆಯಲ್ಲಿ ಪುನೀತ್ ಕೆರೆಹಳ್ಳಿಯನ್ನ ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಮು ಸೌಹಾರ್ದ ಹಾಳುಗೆಡುವವ ಕೆಲಸ ಮಾಡಿ ಪೂಜೆಯಲ್ಲಿ ತೊಡಗಿದ್ದ ಪುನೀತ್ ಕೆರೆಹಳ್ಳಿಯನ್ನ ಪೂಜೆ ಮುಗಿಸಿದ ನಂತರ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಕಾಂಗ್ರೆಸ್ ನಡಿಗೆ ಹಿನ್ನೆಲೆಯಲ್ಲಿ ಕೆ.ಆರ್.ಸರ್ಕಲ್ ಹಾಗೂ ಹಡನ್ಸ್ ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಅವರ ಫೆಕ್ಸ್ ಅಳವಡಿಸಲಾಗಿತ್ತು. ಇದನ್ನು ವಿರೋಧಿಸಿ ಕಿಡಿಗೇಡಿಗಳು ನಿನ್ನೆ ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಂಡಕಾರಿದ್ದರು. ಈ ಸಂಬಂಧ ಮಂಜುನಾಥ್ ಎಂಬುವರು ದೂರು ನೀಡಿದ್ದರು. ಸದ್ಯ ಹಲಸೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ 295 A ಉದ್ದೇಶಪೂರ್ವಕವಾಗಿ ಕೋಮುಗಲಭೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ಮನೋಹರ್ ಪ್ರತಿಕ್ರಿಯಿಸಿದ್ದು ಟಿಪ್ಪು ಸುಲ್ತಾನ್ ಭಾವಚಿತ್ರ ಹರಿದು ಹಾಕಿದ್ದ ಆರೋಪಿಗಳ ವಿರುದ್ಧ ಕಿಡಿಕಾರಿದ್ರು.
PublicNext
14/08/2022 04:31 pm