ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು: ಕರ್ನಾಟಕ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜರಗನಹಳ್ಳಿ ವಾರ್ಡ್- 186ರಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಗುದ್ದಲಿ ಪೂಜೆಯನ್ನು ನೆರವೇರಿಸಿದರು

ಇನ್ನು ಜರಗನಹಳ್ಳಿಯ ಸರ್ಕಾರಿ ಶಾಲೆಗೆ ಹೆಚ್ಚುವರಿ ತರಗತಿ ಕೊಠಡಿ ಬ್ಲಾಕ್‌ಗಳು ಮತ್ತು ಹೆಚ್ಚುವರಿ ಸಲಕರಣೆಗಳ ನಿರ್ಮಾಣ ಹಾಗು ಜರಗನಹಳ್ಳಿಯ ಸತ್ಯಗಣಪತಿ ದೇವಸ್ಥಾನದ ಹಿಂಭಾಗದ ಆಟದ ಮೈದಾನದಲ್ಲಿ ಗ್ಯಾಲರಿ ಮತ್ತು ಅದಕ್ಕೆ ಸಂಬಂಧಿಸಿದ ಕಾಮಗಾರಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜರಗನಹಳ್ಳಿ ವಾರ್ಡ್-186 ರ ಬಿಜೆಪಿ ಮುಖಂಡರು ಶಾಲೆಯ ಮುಖ್ಯಸ್ಥರು ಹಾಗೂ ಸ್ಥಳೀಯ ನಿವಾಸಿಗಳ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/06/2022 04:55 pm

Cinque Terre

1.13 K

Cinque Terre

0

ಸಂಬಂಧಿತ ಸುದ್ದಿ