ಹಿಂದುಳಿದ ಜಾತಿಗಳ ಒಕ್ಕೂಟದಿಂದ ಕೆ.ಆರ್.ಪುರ ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ- 75 ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಅವರು ಡಿಸೆಂಬರ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ವರ್ಗದ ಜನರು ಭಾಗವಹಿಸಲಿದ್ದಾರೆ ಎಂದರು.
ಜನಪರ ಯೋಜನೆಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯನವರ ಹುಟ್ಟು ಹಬ್ಬವನ್ನು ಪಕ್ಷಾತೀತವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯನವರು ಬಡವರ ಬಗ್ಗೆ ವಿಶೇಷವಾದ ಕಾಳಜಿಯನ್ನಿಟ್ಟುಕೊಂಡು ಎಲ್ಲಾ ವರ್ಗಗಳ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅಹಿಂದ ವರ್ಗಗಳಿಗೆ ನೀಡಿರುವ ಕೊಡುಗೆ ಅಪಾರ. ಅಂತವರ ಹುಟ್ಟು ಹಬ್ಬವನ್ನು ದಾವಣಗೆರೆಯಲ್ಲಿ ಪಕ್ಷಾತೀತವಾಗಿ ಆಚರಿಸಲಾಗುತ್ತದೆ.
ಎಲ್ಲಾ ವರ್ಗದ ಜನರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು. ಸಿದ್ದರಾಮಯ್ಯ ಅವರು ಐದು ವರ್ಷಗಳ ಆಡಳಿತವನ್ನು ಯಾವುದೇ ಕಪ್ಪು ಚುಕ್ಕೆ ಇಲ್ಲದೇ ನಡೆಸಿ ಸರ್ವ ಜನಾಂಗದವರಿಗೂ ಸಚಿವ ಸ್ಥಾನ ಒದಗಿಸಿ ಕುರುಬ ಸಮಾಜದ ಗೌರವ ಹೆಚ್ಚಿಸಿದ್ದರು.
ಪೂರ್ವ ತಾಲ್ಲೂಕಿನಿಂದ ಇಪ್ಪತ್ತೈದು ಸಾವಿರಕ್ಕೂ ಅಧಿಕ ಜನರು ಸಿದ್ದರಾಮಯ್ಯನವರ ಅಭಿಮಾನಿಗಳು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶಮೂರ್ತಿ ತಿಳಿಸಿದರು.
ಈ ವೇಳೆ ಮಾಜಿ ಪಾಲಿಕೆ ಸದಸ್ಯ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕ ರಾಮಕೃಷ್ಣಪ್ಪ, ಪೂರ್ವ ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ಮೇಡಹಳ್ಳಿ ರಾಕೇಶ್, ಕಲ್ಕೆರೆ ಮಾದೇಶ್, ಮಧುಸೂದನ್, ಅಂಜಿನಪ್ಪ, ದೊಡ್ಡಗುಬ್ಬಿ ಇದ್ದರು.
Kshetra Samachara
12/07/2022 08:20 pm