ಬೆಂಗಳೂರು:- ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣಕ್ಕೆ 5 ಕೋಟಿ ಮೂಲಧನ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಪೊಲೀಸರ ಕಲ್ಯಾಣಕ್ಕೆ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತದೆ ಎಂದಿದ್ದಾರೆ.
ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪೊಲೀಸರು ಮತ್ತಷ್ಟು ದಕ್ಷತೆ, ಪ್ರಾಮಾಣಿಕರಾಗಿ ಕೆಲಸ ಮಾಡಬೇಕು ಎನ್ನುವುದು ಜನರ ಅಪೇಕ್ಷೆ ಎಂದರು. ಪೊಲೀಸರ ಗೃಹನಿರ್ಮಾಣ ಕಾರ್ಯ 2020ಕ್ಕೆ ಪೂರ್ಣಗೊಂಡಿದೆ. ನಮ್ಮ ಸರ್ಕಾರ 10ಸಾವಿರಕ್ಕಿಂತ ಹೆಚ್ಚು ಮನೆಗಳನ್ನು 5000 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭ ಮಾಡಿದ್ದೇವೆ. ದೇಶದಲ್ಲೇ ಅತಿಹೆಚ್ಚು ಪೊಲೀಸ್ ವಸತಿ ಗೃಹಗಳನ್ನು ಹೊಂದಿರುವ ರಾಜ್ಯ ಕರ್ನಾಟಕ.
ಪ್ರಥಮ ಬಾರಿಗೆ 100 ಪೊಲೀಸ್ ಠಾಣೆಗಳಿಗೆ ಅನುಮತಿ ನೀಡಲಾಗಿದೆ. ಈ ವರ್ಷ ವಾಹನಗಳಿಗೆ 50 ಕೋಟಿ ರೂ.ಗಳ ಅನುದಾನ ನೀಡಿದ್ದೇವೆ. ಆರೋಗ್ಯ ಕರ್ನಾಟಕದಡಿ ಆರೋಗ್ಯ ರಕ್ಷಣೆಗೆ ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ. 16 ಸಾವಿರಕ್ಕೂ ಹೆಚ್ಚು ಪೊಲೀಸರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
PublicNext
02/04/2022 05:44 pm