ವರದಿ - ಗಣೇಶ್ ಹೆಗಡೆ
ಬೆಂಗಳೂರು: ಕೆಲ ತಿಂಗಳ ಹಿಂದೆ ಹೊತ್ತಿ ಉರಿದಿದ್ದ ಪಠ್ಯ ಪರಿಷ್ಕರಣೆ ದಂಗಲ್ ತಣ್ಣಗಾಗಿತ್ತು. ಇದೀಗ ಶಿಕ್ಷಣ ಇಲಾಖೆಯಲ್ಲಿ ಹೊಸ ದೊಂದು ಆಚರಣೆ ಧರ್ಮ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಹೌದು.ಪ್ರಸಕ್ತ ಶೈಕ್ಷಣಿಕ ವರ್ಷ ದಿಂದಲೇ ಭಗವದ್ಗೀತೆಯನ್ನು ಎಲ್ಲಾ ಶಾಲೆಗಳಲ್ಲಿ ಬೋಧನೆ ಸರ್ಕಾರ ಮುಂದಾಗಿದೆ.
ರಾಮಾಯಣ, ಮಹಾಭಾರತದ ಕುರಿತಾದ ಪಠ್ಯಗಳು ಸಿದ್ದ ಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ ಪಾಠ ಮಾಡಲಾಗುತ್ತದೆ.
ನೈತಿಕ ಪಾಠದ ಅಡಿಯಲ್ಲಿ ಭಗವದ್ಗೀತೆ ಪಠ್ಯ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಮಿತಿ ಕೂಡಾ ರಚನೆ ಆಗಲಿದೆ.
ಗುಜರಾತ್‌ನಲ್ಲಿ 6-8 ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಠಣ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಪಠ್ಯ ತಯಾರಿ ನಡೆಸಲಾಗುತ್ತಿದೆ.
ಈ ತಿಂಗಳ ಕೊನೆಯಲ್ಲಿ ಅಂತಿಮ ಪಠ್ಯದ ರೂಪರೇಶೆ ಸಿದ್ದವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
PublicNext
03/08/2022 05:15 pm