ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ವಹಿಸುತ್ತೇವೆ. ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕ್ಲಾರೆನ್ಸ್ ಶಾಲೆಗೆ ಎಲ್ಲ ಧರ್ಮದ ಮಕ್ಕಳೂ ಬರ್ತಿದ್ದಾರೆ. ಅಲ್ಲಿ ಬೈಬಲ್ ಬೋಧನೆ ಆಗಿದ್ದರೆ ಪ್ರಜಾಪ್ರಭುತ್ವದ ಅಡಿಯಲ್ಲಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಬೋರ್ಡ್ ವ್ಯಾಪ್ತಿಯ ಅಲ್ಪಸಂಖ್ಯಾತರ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಿಸಲಾಗಿದೆ. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ. ಪ್ರವೇಶಾತಿ ವೇಳೆ ಬೈಬಲ್ ಇದೆ. ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ ಅಂತ ಕೇಳ್ತಾರೆ. ಇಲ್ಲಾ ಅಂದ್ರೆ ಅಡ್ಮಿಷನ್ ಕೊಡಲ್ಲ ಎನ್ನುತ್ತಾರೆ. ಇದು ತಪ್ಪು ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ಜೂನ್,ಜುಲೈ ನಲ್ಲಿ 4ನೇ ಅಲೆ ಅಂತ ಹೇಳಲಾಗ್ತಿದೆ. ಟಾಸ್ಕ್ ಪೋರ್ಸ್, ಆರೋಗ್ಯ ಇಲಾಖೆಯ ಸೂಚನೆಯನ್ನ ನಾವು ಕೂಡ ಅನುಸರಿಸಲಿದ್ದೇವೆ.

ಶೈಕ್ಷಣಿಕ ವರ್ಷ ಮೇ 16ರಿಂದ ಆರಂಭವಾಗ್ತಿದೆ. ಇದರಲ್ಲಿ‌ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇದೇ ವೇಳೆ ಹೇಳಿದ್ದಾರೆ.

Edited By : Shivu K
PublicNext

PublicNext

26/04/2022 07:11 pm

Cinque Terre

36.48 K

Cinque Terre

1

ಸಂಬಂಧಿತ ಸುದ್ದಿ