ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದೆ. ಅನುಮತಿ ಪಡೆಯದೆ ಬಿಲ್ ಮಂಜೂರಾತಿ ಮಾಡಿದ ಉಪಕುಲಪತಿ ವಿರುದ್ಧ ಸ್ಟೂಡೆಂಟ್ ಗಳು ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ.
ಇದನ್ನು ಪ್ರಶ್ನಿಸಿದ ಹಲವು ವಿದ್ಯಾರ್ಥಿಗಳ ಮೇಲೆ ಎಫ್ ಐಆರ್ ದಾಖಲಿಸಿದ ಕಾರಣ ಇಂದು ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ಬೆಂಗಳೂರು ವಿವಿಗೆ, ವೇಣುಗೋಪಾಲ್ ಬಂದಮೇಲೆ ಅನೇಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪ ಮಾಡುತ್ತಿದ್ದಾರೆ. ವಿಎಸ್ ವೇಣುಗೋಪಾಲ್ ತಮ್ಮ ಸಿಬ್ಬಂದಿಗಳಿಗೆ ತರಾತುರಿಯಿಂದ ಟೆಂಡರ್ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿದೆ.
ರಾತ್ರೋರಾತ್ರಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಕಿಡಿಕಾರುತ್ತಿದ್ದಾರೆ.ಇದನ್ನು ಪ್ರಶ್ನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಎಫ್ ಐಆರ್ ದಾಖಲಿಸಿ ವಿದ್ಯಾರ್ಥಿಗಳ ಬಾಯಿ ಮುಚ್ಚಿಸಲು ಮುಂದಾಗಿದ್ದರು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಾಕಿರುವ ಕೇಸ್ ಗಳನ್ನು ಕೂಡಲೇ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ವಿದ್ಯಾರ್ಥಿಗಳು ಹೆಳಿದ್ದಾರೆ. ವಿತ್ತ ಅಧಿಕಾರಿ ಜಯಲಕ್ಷ್ಮಿ ವಿದ್ಯಾರ್ಥಿಗಳಿಗೆ ಕ್ಷಮೆ ಕೇಳಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ಕುಳಿತಿದ್ದಾರೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
30/05/2022 08:13 pm