ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

5 ಲಕ್ಷ ಲೀಟರ್ ಸಾಮರ್ಥ್ಯದ ನೆಲಮಟ್ಟದ ಎರಡು ಜಲ ಸಂಗ್ರಹಗಾರದ ಕಾಮಗಾರಿಗೆ ಗುದ್ದಲಿ ಪೂಜೆ

ಆನೇಕಲ್: ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವುದೇ ರೀತಿಯ ಕುಡಿಯುವ ನೀರಿನ ಬಗ್ಗೆ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಶಾಸಕ ಶಿವಣ್ಣ ತಿಳಿಸಿದರು.

ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯ ಕಮ್ಮಸಂದ್ರ ಮತ್ತು ವೀರಸಂದ್ರ ಗ್ರಾಮಗಳಲ್ಲಿ ನಗರೋತ್ಥಾನ ಯೋಜನೆಯ ಎಸ್.ಸಿ.ಪಿ. ಅನುಧಾನದಡಿಯಲ್ಲಿ ಕಾವೇರಿ ನೀರಿನ ಶೇಖರಣೆಗೆ 5 ಲಕ್ಷ ಲೀಟರ್ ಸಾಮರ್ಥ್ಯದ ನೆಲಮಟ್ಟದ ಎರಡು ಜಲ ಸಂಗ್ರಹಗಾರದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಭಾಗವಹಿಸಿ ಮಾತನಾಡಿದರು.

ಇನ್ನು ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಹೆಬ್ಬಗೋಡಿ ನಗರಸಭೆ ಸದಸ್ಯರು, ಮುಖಂಡರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

13/05/2022 08:05 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ