ಬೊಮ್ಮನಹಳ್ಳಿ:ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿ ಮಾಡಿತ್ತು ಹೀಗಾಗಿ ಅಲ್ಲಿನ ಸ್ಥಳೀಯರು ಸಾಕಷ್ಟು ದೂರುಗಳು ಸಹ ಕೇಳಿ ನೀಡಿದ್ದರು.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್ ಎಸ್ ಆರ್ ಬಡಾವಣೆಯ ಕಚೇರಿಯಲ್ಲಿ ಬೊಮ್ಮನಹಳ್ಳಿ ವಲಯದಲ್ಲಿ ಮಳೆಯಿಂದಾಗಿ ಹಾನಿ ಉಂಟಾದ ಪ್ರದೇಶಗಳ ಬಗ್ಗೆ ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಸತೀಶ್ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣ ಮೂರ್ತಿ ಎಲ್ಲಾ ವಾರ್ಡಿನ ನಿಕಟಪೂರ್ವ ಬಿಬಿಎಂಪಿ ಸದಸ್ಯರು ಹಾಗೂ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
23/05/2022 10:56 pm