ಬೆಂಗಳೂರು: ಯಲಹಂಕ ಶಾಸಕ ವಿಶ್ವನಾಥ್ ಅವರನ್ನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ. ಹಾಗೆಯೇ ರಾಜ್ಯದಲ್ಲಿ 150 ಸ್ಥಾನ ಪಡೆದು ಬಿಜೆಪಿ ಪಕ್ಷವೇ ಸರ್ಕಾರ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಯಲಹಂಕ ಶಾಸಕ ವಿಶ್ವನಾಥ್ ಅವರ 60ನೇ ವರ್ಷದ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಯಲಹಂಕದಲ್ಲಿ ಮಾತನಾಡಿದರು. ವಿಶ್ವನಾಥ್ ಗೆಲ್ತಾನೆ, ಹಾಗೆಯೇ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆದು ಕೇಂದ್ರದಲ್ಲಿ ಮೋದಿ ಅವರ ಶಕ್ತಿಯನ್ನು ಹೆಚ್ಚಿಸಿ ಎಂದು ಕರೆ ನೀಡಿದರು.
ವಿಶ್ವನಾಥ್ ಹುಟ್ಟುಹಬ್ಬ ಪ್ರಯುಕ್ತ ಯಲಹಂಕದ ಹೊನ್ನೇನಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ 30000ಕ್ಕೂ ಹೆಚ್ಚು ಜನ ಸಾಕ್ಷಿಯಾದರು. ಬೆಳಗ್ಗೆ ಮುಖ್ಯಮಂತ್ರಿ ಆದಿಯಾಗಿ ಸಚಿವರು, ನಾಯಕರು, ಕಾರ್ಯಕರ್ತರು ಭಾಗವಹಿಸಿ ಶಾಸಕರಿಗೆ ಶುಭಾಶಯ ಕೋರಿ ಭರ್ಜರಿ ಭೋಜನ ಸವಿದರು. ಇದೇ ವೇಳೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಸಾವಿರಾರು ಜನರನ್ನು ರಂಜಿಸಿತು.
- ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್ ಯಲಹಂಕ
PublicNext
24/07/2022 10:23 pm