ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಿದ್ದೇವೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಯೋಜನೆ ಜಾರಿ ಮಾಡಲಾಗಿದ್ದು, ಅವುಗಳ ಅನುಷ್ಠಾನದ ಮಾಹಿತಿಯನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಆರ್.ಟಿ ನಗರ ನಿವಾಸಿದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ, ರೈತರಿಗೆ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ವರ್ಗದವರಿಗೆ ಮಹಿಳೆಯರಿಗೆ ಯುವಕರಿಗೆ ಮಾಡಿರುವಂತಹ ಕಾರ್ಯಕ್ರಮಗಳನ್ನು ತಿಳಿಸುವಂತಹ ಕೆಲಸ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆಯ ಅನಾವರಣ, ಜನಸ್ಪಂದನ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಮಾಡಲಾಗುತ್ತದೆ. ಎರಡು ಲಕ್ಷಕ್ಕಿಂತ ಹೆಚ್ಚು ಜನ ಭಾವಹಿಸಲಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಲಿದ್ದಾರೆ. ವಿಶೇಷವಾಗಿ ಚಿಕ್ಕಬಳ್ಳಾಪುರ, ಕೋಲಾರ ಬೆಂಗಳೂರಿನ ಪಕ್ಷ ಸಂಘಟನೆ ಉತ್ತಮವಾಗಿ ಮಾಡಿದೆ. ಅದರ ಸಂಕೇತವಾಗಿ ಈ ಕಾರ್ಯಕ್ರಮ ಮಾಡಲಾಗುತ್ತದೆ ಎಂದರು.

Edited By :
PublicNext

PublicNext

10/09/2022 12:18 pm

Cinque Terre

26.43 K

Cinque Terre

4

ಸಂಬಂಧಿತ ಸುದ್ದಿ