ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತೀವ್ರ ಸ್ವರೂಪ ಪಡೆದ ಈದ್ಗಾ ಮೈದಾನ ವಿವಾದ; ಹಿಂದೂ ಸಂಘಟನೆ- ಖಾಕಿ 'ಜಟಾಪಟಿʼ

ಈದ್ಗಾ ಮೈದಾನಕ್ಕೆ ಸಂಬಂಧಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದು ಚಾಮರಾಜಪೇಟೆ ನಾಗರಿಕ ವೇದಿಕೆ, ಶ್ರೀರಾಮ ಸೇನೆ, ವರ್ತಕರು, ಹಿಂದೂ ದೇವಾಲಯಗಳ ಪದಾಧಿಕಾರಿಗಳು ಹಾಗೂ ಇತರ ಹಿಂದು ಪರ ಸಂಘಟನೆಗಳು ಬಂದ್ ಕರೆ ಕೊಟ್ಟಿದ್ದವು. ಆಜಾದ್ ನಗರ, ಗೋರಿಪಾಳ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಚಾಮರಾಜಪೇಟೆ ಸುತ್ತಮುತ್ತಲಿನ ಹಿಂದೂ ಬಾಹುಳ್ಯದ ಪ್ರದೇಶಗಳಲ್ಲಿಯೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈದ್ಗಾ ಮೈದಾನದಲ್ಲಿ ಬೆಳಗ್ಗಿನಿಂದಲೂ ಪ್ರತಿಭಟನಾಕಾರರು ಜಮಾಯಿಸಿದ್ದರು. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮೈದಾನಕ್ಕೆ ನುಗ್ಗಲು ಯತ್ನಿಸಿದವರನ್ನು ವಶಕ್ಕೆ ಪಡೆದರು. ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ಸಂಬರಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ. ಮುಸ್ಲಿಮರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ, ಕ್ಷೇತ್ರದ ಶಾಸಕರು ಪೊಲೀಸರ ಮೂಲಕ ಅಡ್ಡಿಪಡಿಸುತ್ತಿದ್ದಾರೆ ಎಂಬುದು ಬಂದ್ ಕರೆ ಕೊಟ್ಟ ಸಂಘಟನೆಗಳು ಆರೋಪಿಸಿದೆ.

* ಪಾಲಿಕೆ ಆಯುಕ್ತ ದ್ವಂದ್ವ ಹೇಳಿಕೆ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿ ದ್ವಂದ್ವ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಒಮ್ಮೆ ಇದನ್ನು ವಕ್ಫ್‌ ಆಸ್ತಿ ಎಂದರೆ ಮತ್ತೊಮ್ಮೆ ಬಿಬಿಎಂಪಿ ಆಸ್ತಿ ಎನ್ನುತ್ತಿದ್ದಾರೆ. ಆಯುಕ್ತರ ಬೇಜವಾಬ್ದಾರಿಯಿಂದಾಗಿ ಈದ್ಗಾ ಮೈದಾನ ವಿವಾದಿತ ಸ್ಥಳವಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

* 1952ರಿಂದಲೇ ವಿವಾದ: ಚಾಮರಾಜಪೇಟೆ ಆಟದ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆಯಲಾಗುತ್ತಿದೆ. 1952ರಿಂದಲೇ ಈ ವಿವಾದ ಪ್ರಾರಂಭವಾಗಿದೆ. ಈ ಮೈದಾನದಲ್ಲಿ ಹಿಂದೂಗಳ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ ಇದು ಮೈದಾನವಾಗಿ ಇರುವುದಿಲ್ಲ ಎಂದು ವಿಶ್ವ ಸನಾತನ ಪರಿಷತ್ ಎಚ್ಚರಿಕೆ ನೀಡಿತ್ತು.

Edited By :
PublicNext

PublicNext

12/07/2022 06:01 pm

Cinque Terre

31.86 K

Cinque Terre

1

ಸಂಬಂಧಿತ ಸುದ್ದಿ