ವಿವಾದಿತ ಚಾಮರಾಜ ಪೇಟೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ವಿವಿಧ ಸಂಘಟನೆಗಳು ಬಿಬಿಎಂಪಿ ಗೆ ಅರ್ಜಿ ಸಲ್ಲಿಸಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ತಿಳಿಸಿದರು.
ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮ ಸೇನೆ ಸಂಘಟನೆ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ಅನುಮತಿ ಕೋರಿ, ವಿಶ್ವ ಸನಾತನ ಪರಿಷತ್ ಆಗಸ್ಟ್ 14 ಹಾಗೂ 15 ರಂದು ಭಾರತ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆಗೆ ಅನುಮತಿ ಕೋರಿ ಮತ್ತು ವಂದೇ ಮಾತರಂ ಸಮಾಜ ಸೇವೆ ಸಂಸ್ಥೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಅವಕಾಶ ಕೋರಿ ಅರ್ಜಿಗಳನ್ನು ಬಿಬಿಎಂಪಿ ಪಶ್ಚಿಮ ಆಯುಕ್ತರ ಕಚೇರಿಗೆ ಸಲ್ಲಿಸಿದ್ದಾರೆ. ಈ ಕುರಿತು ಪೊಲೀಸರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ಡಿ ಲಿಮಿಟೇಷನ್ ಪಟ್ಟಿ ಸಿದ್ಧ ಪಡಿಸಿ ಸರ್ಕಾರಕ್ಕೆ ಇಂದು ಅಧಿಕೃತವಾಗಿ ಸಲ್ಲಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರದಿ ಸಲ್ಲಿಸಿದ್ದಾರೆ. 198 ವಾರ್ಡ್ ಗಳನ್ನು ಜನಸಂಖ್ಯೆ ಆಧಾರದಲ್ಲಿ 243 ವಾರ್ಡ್ ಗಳಾಗಿ ವಿಂಗಡಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
PublicNext
09/06/2022 04:33 pm