ಮಳೆ ಹಾನಿಗೆ ಪರಿಹಾರವಾಗಿ 10 ಸಾವಿರ ರೂ. ಪರಿಹಾರ ಘೋಷಿಸಿದ್ದ ಬಿಬಿಎಂಪಿ ನೀಡಿದ್ದು ಮಾತ್ರ 1 ರೂ
ಹೌದು.. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್ ನಿವಾಸಿಗಳು ನಿನ್ನೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರು.
ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ವಾರ್ಡ್‌ನಲ್ಲಿ ಮಳೆ ಬಂದಾಗ ಸರ್ವೆ ನಡೆಸಿದ್ದ ಅಧಿಕಾರಿಗಳು, ಸಂತ್ರಸ್ತರ ವಿವರ, ಬ್ಯಾಂಕ್ ಖಾತೆ ಸೇರಿ ಇನ್ನಿತರ ಮಾಹಿತಿ ಪಡೆದುಕೊಂಡಿದ್ದರು. ಅದಾದ ಒಂದು ವಾರದೊಳಗಾಗಿ 10 ಸಾವಿರ ರೂ. ಪರಿಹಾರ ಬ್ಯಾಂಕ್ ಖಾತೆಗೆಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಅದರನಂತರ ಬ್ಯಾಂಕ್ ಖಾತೆ ಸರಿಯಾಗಿದೆಯೇ ಎಂದು ಪರೀಕ್ಷಿಸಲು ಎಲ್ಲರ ಖಾತೆಗೆ 1 ರೂ. ಹಾಕಲಾಗಿತ್ತು. ಅದನ್ನು ಹೊರತುಪಡಿಸಿದರೆ ಯಾವುದೇ ಹಣಪಾವತಿಯಾಗಿಲ್ಲ ಎಂಬುದು ಸಂತ್ರಸ್ತರ ಆರೋಪ.
ಅದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್, ಪರಿಹಾರ ನೀಡದಿರುವುದಕ್ಕೆ ಕಾರಣವೇನು ಎಂಬುದನ್ನು ಪರಿಶೀಲಿಸುತ್ತೇನೆ. ಈ ಬಾರಿಯ ಮಳೆಗೆ ಹಾನಿ ಆಗಿದ್ದರೇ ಮಾತ್ರ ಅದಕ್ಕೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ವರದಿ- ಗಣೇಶ್ ಹೆಗಡೆ, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
Kshetra Samachara
01/06/2022 06:54 pm