ಆನೇಕಲ್: ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿಯ ಹೀನ ಕೃತ್ಯದ ವಿರುದ್ಧ ಇಂದು ಆನೇಕಲ್ ನ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆಯಿಂದ ಟೌನ್ ವರೆಗೆ ಪ್ರಮುಖ ಬೀದಿಗಳಲ್ಲಿ ಶಾಸಕ ಬಿ ಶಿವಣ್ಣ ನವರ ಅಧ್ಯಕ್ಷತೆಯಲ್ಲಿ ಪಂಜಿನ ಮೆರವಣಿಗೆ ಮಾಡುವುದರ ಮೂಲಕ ಪ್ರತಿಭಟನೆ ನಡೆಸಲಾಯಿತು.
ಇನ್ನೂ ಈ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಮಂಡಲ ಅಧ್ಯಕ್ಷರುಗಳು, ಕಾರ್ಯಕರ್ತರು, ಪುರಸಭೆ, ನಗರಸಭೆ ಮತ್ತು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಭಾಗಿಯಾಗಿದ್ರು ಸಿದ್ದರಾಮಯ್ಯರವರಿಗೆ ಭದ್ರತೆ ನೀಡಲು ವಿಫಲವಾದ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ, ಘೋಷಣೆ ಕೂಗಲಾಯಿತು.
Kshetra Samachara
20/08/2022 09:22 pm